Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

28 May 2014

ಅತ್ಯುತ್ತಮ ಮುಖ್ಯೋಪಾಧ್ಯಾಯ ಪ್ರಶಸ್ತಿ

ನಮ್ಮ ಶಾಲೆಯ ಮುಖ್ಯೋಪಾಧ್ಯಾಯರಾಗಿ ಎಂಟು ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಯು. ರವಿಕೃಷ್ಣ ಇವರನ್ನು ಕೇರಳ ಪ್ರೈವೇಟ್ ಸೆಕೆಂಡರಿ ಸ್ಕೂಲ್ಸ್ ಹೆಡ್‍ಮಾಸ್ಟರ್ಸ್ ಅಸೋಸಿಯೇಷನ್ 10.05.2014 ಶನಿವಾರ ಪತ್ತನಂತಿಟ್ಟ ಜಿಲ್ಲೆಯ ತಿರುವಲ್ಲದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ 2013-14ನೇ ಸಾಲಿನ ಅತ್ಯುತ್ತಮ ಮುಖ್ಯೋಪಾಧ್ಯಾಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಸಂಸದ ಆಂಟೋ ಆಂಟನಿ ಪ್ರಶಸ್ತಿ ವಿತರಿಸಿದರು.

No comments:

Post a Comment