Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

04 September 2015

ರಕ್ಷಕ ಶಿಕ್ಷಕ ಸಂಘದ ಮಹಾಸಭೆ 2015


“ನೀರ್ಚಾಲಿನ ಗ್ರಾಮೀಣ ಪರಿಸರದಲ್ಲಿ ಬೆಳೆದು ಬಂದ ಮಹಾಜನ ವಿದ್ಯಾಲಯವು ಈಗ ಪುನ: ಹೈಯರ್ ಸೆಕೆಂಡರಿ ವಿಭಾಗದ ತನಕ ಬೆಳೆದಿದೆ. ಈ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ವಂದನೆಗಳು. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗಾಗಿ ತಕ್ಷಣವೇ ಶಾಲಾ ವಾಹನವನ್ನು ಖರೀದಿಸಿ ವಿದ್ಯಾರ್ಥಿಗಳ ಸೌಕರ್ಯಕ್ಕಾಗಿ ನೀಡಲಿದ್ದೇವೆ." ಎಂದು ನಮ್ಮ ಶಾಲೆಯ ವ್ಯವಸ್ಥಾಪಕ ಜಯದೇವ ಖಂಡಿಗೆ ಅಭಿಪ್ರಾಯಪಟ್ಟರು. ಅವರು 04.09.2015 ಶುಕ್ರವಾರ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಂಗೋಳಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ನಿಡುಗಳ, ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷೆ ಫೌಝಿಯಾ ಮತ್ತು ಪರಮೇಶ್ವರಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿ ವರದಿ ವಾಚಿಸಿದರು. ಶಿಕ್ಷಕರಾದ ಎಚ್.ಸೂರ್ಯನಾರಾಯಣ ವಂದಿಸಿದರು. ಶಿವಪ್ರಕಾಶ್. ಎಂ.ಕೆ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment